Homeಪ್ರಮುಖ ಸುದ್ದಿ
ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು : ಅಪೋಲೊ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.
ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ.