ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್; ಸಂಪೂರ್ಣ ಮಾಹಿತಿ ಇಲ್ಲಿದೆ

(AKS) ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳಿಗೆ ಸಾಮಾನ್ಯ ಅಥವಾ ವೃತ್ತಿಪರ ಕೋರ್ಸ್ಗಳನ್ನು ಮುಂದುವರಿಸಲು ಸ್ಕಾಲರ್ ಶಿಪ್ ನೀಡುತ್ತಿದ್ದು, ತಮ್ಮ ಶಿಕ್ಷಣವನ್ನು ಮುಂದುವರೆಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಧಾರ್ ಕೌಶಲ್ ಸ್ಕಾಲರ್ ಶಿಪ್ ಪ್ರೋಗ್ರಾಂ ಫಾರ್ ಯೂಥ್ ವಿಥ್ ದಿಸಬಿಲಿಟಿಸ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಸ್ಕಾಲರ್ ಶಿಪ್ ಎಲ್ಲಾ ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳಿಗೆ ಅವರ ಭೌಗೋಳಿಕ ಪ್ರದೇಶ, ಲಿಂಗ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಸಮಾನ ಶೈಕ್ಷಣಿಕ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಎಎಚ್‌ಎಫ್‌ಎಲ್) ನ ಉಪಕ್ರಮವಾಗಿದೆ. ಇದಕ್ಕಾಗಿ ಅರ್ಹತೆ ಏನಿರಬೇಕು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತದಾದ್ಯಂತ ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಕೋರ್ಸ್ಗಳನ್ನು ಅನುಸರಿಸುತ್ತಿರುವ ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.
* ಭಾರತದಾದ್ಯಂತದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* 2.5- 3 ಲಕ್ಷದಷ್ಟು ಒಟ್ಟು ವಾರ್ಷಿಕ ಕುಟುಂಬದ ಆದಾಯ ಹೊಂದಿರುವ ಅರ್ಜಿದಾರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
10,000 – 50,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
23-07-2024
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/AKSP1 ಈ ವೆಬ್ ಸೈಟ್ ಗೆ ಬೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.