ಪ್ರಮುಖ ಸುದ್ದಿ
“ಗೋ ಬ್ಯಾಕ್ ಅಮಿತ್ ಶಾ” ಕೈ ಪ್ರತಿಭಟನೆಗೆ ಸಿದ್ಧತೆ
“ಗೋ ಬ್ಯಾಕ್ ಅಮಿತ್ ಶಾ” ಕೈ ಕಾರ್ಯಕರ್ತರಿಂದ ಪ್ರತಿಭಟನೆ..!
ಹುಬ್ಬಳ್ಳಿಃ ಸಿಎಎ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶ ಹಿನ್ನೆಲೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಆಗಮಿಸುತ್ತಿರುವದನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಗೋ ಬ್ಯಾಕ್ ಅಮಿತ್ ಶಾ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಇಂದು ಮದ್ಯಾಹ್ನ 3 ಗಂಟೆಗೆ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೈ ಪಕ್ಷದ ಪ್ರಮುಖರು ತಿಳಿಸಿದ್ದಾರೆ.