ಕಥೆಬಸವಭಕ್ತಿ

ಸಿರಿವಂತನ ಕಣ್ಣು ತೆರೆಸಿದ ಸಂತ ಅತ್ಯದ್ಭುತ ಸಂದೇಶ ಓದಿ

ಜೀವಂತಸಿರಿ - ಜಡಸಿರಿ

ಜಡಸಿರಿ

ಚೀನಾ ದೇಶದ ಸಂತ ಲಾವೋತ್ಸೆ ನಾವಿನಲ್ಲಿ ಕುಳಿತು ನದಿ ದಾಟುತ್ತಿದ್ದ. ಅದೇ ನಾವಿನಲ್ಲಿ ಒಬ್ಬ ಸಿರಿವಂತನಿದ್ದ. ಸಂತನನ್ನು ಕಂಡು ವಂದಿಸಿ ಚಿನ್ನದ ಸರವನ್ನು ಕಾಣಿಕೆಯಾಗಿ ಕೊಟ್ಟ.

ತಕ್ಷಣ ಸಂತ ಆ ಸರವನ್ನು ನದಿಗೆ ಎಸೆದ. ಸಿರಿವಂತನು ನೀರಿಗಿಳಿದು ಅದನ್ನು ತಂದ. ಸಂತರೆ ಇದು ಚಿನ್ನದ ಸರ. ಇದರ ಬೆಲೆ ಎಷ್ಟು ನಿಮಗೆ ಗೊತ್ತೇ ? ಎಂದು ಕೇಳಿದ.

ಸಂತ ಲಾವೋತ್ಸನಿಗೆ, ಅದರ ಬೆಲೆ ನಿನ್ನನ್ನು ನೀರಿಗೆ ಜಿಗಿಸುವಷ್ಟು. ಈ ನದಿಯು ಸಾವಿರಾರು ಬಣ್ಣ ಬಣ್ಣದ ಮೀನುಗಳಿಗೆ, ಮೊಸಳೆಗಳಿಗೆ, ಅಸಂಖ್ಯ ಜಲಚರ ಪ್ರಾಣಿಗಳಿಗೆ ಆಶ್ರಯ ಕೊಟ್ಟಿದೆ. ಈ ಜೀವಂತ ಸಿರಿಯ ಎದುರು ನಿನ್ನ ಈ ನಿರ್ಜೀವ ಚಿನ್ನದ ಸರಕ್ಕೆ ಏನು ಬೆಲೆ ? ಸಂತರ ಈ ನುಡಿಗಳ ಕೇಳಿದಾಗ ಸಿರಿವಂತನ ಕಣ್ಣು ತೆರೆಯಿತು.

🖊️ಸಂಗ್ರಹ🖋️
ಡಾ.ಈಶ್ವರಾನಂದ ಸ್ವಾಮೀಜಿ.
📞 – 9341137882.

Related Articles

Leave a Reply

Your email address will not be published. Required fields are marked *

Back to top button