ಪ್ರಮುಖ ಸುದ್ದಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜಾಸ್ತಿ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರಃ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆಯಾಗುತ್ತಿದ್ದು, ಮುಂಗಾರು ಬಿರುಸಿನಿಂದಕೂಡಿದೆ.
ಕರಾವಳಿ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಹ, ಕೋಲಾರ, ಕೊಡಗು,ಹಾಸನ,ಚಿಕ್ಕಮಗಳೂರ, ಬೆಂಗಳೂರ ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗೃತೆವಹಿಸುತೆ ಎಚ್ಚರಿಕೆ ನೀಡಲಾಗಿದೆ.
ಹಲವಡೆ ಆಣೆಕಟ್ಟುಗಳು ತುಂಬಿರುವ ಕಾರಣ ನದಿಗಳಿಗೆ ನೀರು ಹರಿಸುವ ಅನಿವಾರ್ಯತೆ ಎದುರಾಗಲಿದೆ. ನದಿಪಾತ್ರದ ಜನತೆ ಎಚ್ಚರಿಕೆಯಿಂದ ಇರಲು ಮುನ್ಸೂಚನೆ ನೀಡಿದೆ.