ಪ್ರಮುಖ ಸುದ್ದಿ
ರಾಜ್ಯದಲ್ಲಿ ಹಲವರು ‘ಕಮಲ’ದ ‘ಕೈ’ ಹಿಡಿಯಲಿದ್ದಾರೆ, ‘ತೆನೆಹೊತ್ತು’ ಬರಲಿದ್ದಾರೆ!
ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅಭಿವೃದ್ಧಿ ಪರ ಬಿಜೆಪಿಗೆ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಂತೆಯೇ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಹಿಡಿಯುವುದರಲ್ಲಿ ಸಂದೇಹವಿಲ್ಲ ಎಂದು ಮಾಜಿ ಮುಖ್ಯಮಂತ್ರಿ , ಬಿಜೆಪಿ ರಾಕ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ದೇಶದೆಲ್ಲೆಡೆ ಬಿಜೆಪಿ ಗೆದ್ದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ನಿಲುವುಗಳಿಗೆ ಜನಮನ್ನಣೆ ಸಿಗುತ್ತಿದೆ. ರಾಜ್ಯದಲ್ಲೂ ವಿವಿಧ ಪಕ್ಷದ ನಾಯಕರು ಫೋನ್ ಮೂಲಕ ಸಂಪರ್ಕಿಸಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ , ತಾಲೂಕು ಮಟ್ಟದಲ್ಲೂ ಸಹ ಇತರೆ ಪಕ್ಷಗಳ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಕ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.