ಪ್ರಮುಖ ಸುದ್ದಿ
ಭೀಕರ ಅಪಘಾತ : ಕಾರು – ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸಾಣಿಕೆರೆ ಕ್ರಾಸ್ ಸಮೀಪ್ ಕ್ರೂಸರ್ ಮತ್ತು ಇಂಡಿಕಾ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರ್ ಚಾಲಕ , ರಾಯಚೂರು ಜಿಲ್ಲೆ ಲಿಂಗಸುಗೂರು ಮೂಲದ ಹನುಮಂತಪ್ಪ(30) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನುಳಿದ ನಾಲ್ವರು ಗಂಭೀರ ಗಾಯಗೊಂಡಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಚಳ್ಳಕೆರೆ ಠಾಣೆ ಸಿಪಿಐ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.