ಪ್ರಮುಖ ಸುದ್ದಿ
ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಬೇಗಂ ಆಯ್ಕೆ
ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸೂರಯ್ಯ ಬೇಗಂ ಆಯ್ಕೆ
ಶಹಾಪುರಃ ಇಲ್ಲಿನ ಕವಿಯಿತ್ರಿ, ಸಾಹಿತಿ ಸೂರಯ್ಯ ಬೇಗಂ ಅವರನ್ನು ಯಾದಗಿರಿ ಜಿಲ್ಲೆಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ ಪ್ರಕಟಣೆಗೆ ತಿಳಿಸಿದ್ದಾರೆ.
ಮಕ್ಕಳಲ್ಲಿರುವ ಸೃಜನಾತ್ಮಕ ಸಾಹಿತ್ಯ ಪ್ರತಿಭೆಯನ್ನು ಹೊರತಂದು ಅವರಿಗೆ ಪ್ರೋತ್ಸಾಹ ನೀಡಿ ಮಕ್ಕಳ ಸಾಹಿತ್ಯಕ್ಕೆ ದುಡಿವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕಗಳಿಗೆ ಅಧ್ಯಕ್ಷರನ್ನು ಈ ಕೂಡಲೇ ನೇಮಿಸುವ ಅಧಿಕಾರವನ್ನು ಸೂರಯ್ಯ ಬೇಗಂ ಅವರಿಗೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಮಕ್ಕಳ ಸಾಹಿತ್ಯದ ಬಗ್ಗೆ ಜಿಲ್ಲೆಯಾದ್ಯಂತ ಸಂಘಟನೆ, ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಉಂಟು ಮಾಡುವ ಕಾರ್ಯವನ್ನು ಮಾಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.