ಪ್ರಮುಖ ಸುದ್ದಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ?
ಮಂಡ್ಯ : ಯಾವ ಮೈತ್ರಿಯೂ ಇಲ್ಲ, ಉಪಚುನಾವಣೆ ಸಂದರ್ಭದಲ್ಲಿ 17ವಿಧಾನಸಭಾ ಕ್ಷೇತ್ರಗಳಿಗೂ ಜೆಡಿಎಸ್ ಅಬ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಬೇಡ ಎಂದು ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗಿದಾಗ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾವ ಮೈತ್ರಿಯೂ ಇಲ್ಲ. ಉಪ ಚುನಾವಣೇಲಿ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಅಬ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. 17 ಕ್ಷೇತ್ರಗಳಿಗೆ ಚುನಾವಣೆ ಬರುತ್ತದೆಯೋ ಅಥವಾ ಬಿಜೆಪಿ ಸರ್ಕಾರ ಪತನವಾಗಿ 224 ಕ್ಷೇತ್ರಗಳಿಗೂ ಚುನಾವಣೆ ಬರುತ್ತದೋ ಗೊತ್ತಿಲ್ಲ. ಕಾರ್ಯಕರ್ತರು ಸರ್ವ ಸನ್ನದ್ಧರಾಗಿರಿ ಎಂದು ಕರೆ ನಿಡಿದ್ದಾರೆ. ಆ ಮೂಲಕ ಬಹಿರಂಗ ಸಭೆಯಲ್ಲಿ ಯಾವ ಮೈತ್ರಿಯೂ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್ ಜತೆಗಿನ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ.