ಪ್ರಮುಖ ಸುದ್ದಿ
ಬೆಂಗಳೂರು : ಸಿನಿಮೀಯ ರೀತಿಯಲ್ಲಿ ಜೋಡಿ ಹತ್ಯೆ!
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಬೆನ್ನಟ್ಟಿ ಬಂದು ಬೈಕಿಗೆ ಡಿಕ್ಕಿ ಹೊಡೆದು ಬೀಳಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬೈಕಿನಲ್ಲಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜೆ.ಪಿ.ನಗರದ 24 ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಂಜುನಾಥ್ ಅಲಿಯಾಸ್ ಮಂಜ ಮತ್ತು ನವೀನ್ ಹತ್ಯೆಗೊಳಗಾದವರು ಎಂದು ಗುರುತಿಸಲಾಗಿದೆ. 24 ನೇ ಕ್ರಾಸ್ ನ ಖಾಸಗಿ ಬ್ಯಾಂಕಿನ ಎಟಿಎಂ ಕೇಂದ್ರದ ಸಮೀಪ ನವೀನ್ ಹತ್ಯೆ ಮಾಡಿದ ದುಷ್ಕರ್ಮಿಗಳು ಪುಟ್ಟೇನಹಳ್ಳಿ ಜಂಕ್ಷನ್ ಸಮೀಪ ಮಂಜುನನ್ನು ಹತ್ಯೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಜೆಪಿ ನಗರ ಹಾಗೂ ಪುಟ್ಟೇನಹಳ್ಳಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.