Homeಜನಮನಪ್ರಮುಖ ಸುದ್ದಿ
ಅವರ ಪಕ್ಷದಲ್ಲಿರುವ ಒಳ ಜಗಳಗಳನ್ನು ಸರಿಪಡಿಸಿಕೊಳ್ಳಲಿ, ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಬೇಕು?- ಪರಮೇಶ್ವರ್ ವಾಗ್ದಾಳಿ
ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಬೇಕು. ಅವರ ಪಕ್ಷದಲ್ಲಿರುವ ಒಳ ಜಗಳಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿರೋ ಧ ಪಕ್ಷದ ನಾಯಕ ಆರ್. ಅಶೋಕ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ ವಾಗ್ದಾಳಿ ನಡೆಸಿದ್ದಾರೆ.
ನಾವೇನು ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಆ ಪಕ್ಷದವರೇ ಬದಲಾವಣೆ ಮಾಡುತ್ತಾರೆ ಎಂಬ ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ ಎಂದರು.
ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಹುಟ್ಟಿಕೊಳ್ಳುವುದಿಲ್ಲ. ಈಗಾಗಲೇಮುಖ್ಯಮಂತ್ರಿಗಳಿದ್ದಾರೆ, ಆಡಳಿತ ನಡೆಯುತ್ತಿದೆ. ಕೋರ್ಟ್‌ನಲ್ಲಿ ಕೇಸ್ ಇದೆ, ಏನಾಗುತ್ತದೆ ಎಂಬುದನ್ನು ಕಾದು ನೋಡೋಣ’ ಎಂದರು.