ಪ್ರಮುಖ ಸುದ್ದಿ
ನಾನು ಕೆಪಿಸಿಸಿ ಅದ್ಯಕ್ಷ, ಅಧಿಕೃತವಾಗಿ ಹೇಳುತ್ತಿದ್ದೇನೆ ಕೇಳ್ರೀ : ಪರಂ ಗರಂ
ಚಿತ್ರದುರ್ಗ : ನಾನು ಕೆಪಿಸಿಸಿ ಅದ್ಯಕ್ಷನಾಗಿ ಅಧಿಕೃತವಾಗಿ ಹೇಳುತ್ತಿದ್ದೇನೆ ಕೇಳ್ರಿ ಸಮ್ಮಿಶ್ರ ಸರ್ಕಾರ ಒಪ್ಪಂದದಂತೆ ಐದು ವರ್ಷ ಪೂರೈಸುತ್ತದೆ ಎಂದು ಚಿತ್ರದುರ್ಗದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ವಿಡಿಯೋ ಬಹಿರಂಗವಾದುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪರಮೇಶ್ವರ್ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ.
ಮಾಜಿ ಸಿಎಂ ಸಿದ್ಧರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ. ಅವರು ಯಾವ ಕಾರಣಕ್ಕೆ ಹಾಗೇ ಹೇಳಿದ್ದಾರೆ ಎಂದು ಅವರಿಂದಲೇ ಹೇಳಿಸಿ. ಆದರೆ, ಸಮ್ಮಿಶ್ರ ಸರ್ಕಾರ ರಚನೆ ವೇಳೆ ಆಗಿರುವ ಒಪ್ಪಂದದಂತೆ ಐದು ವರ್ಷ ಪೂರೈಸುತ್ತದೆ ಎಂದಷ್ಟೇ ನಾನು ಹೇಳುತ್ತೇನೆ. ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಆದರೆ, ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವ ವಿಶ್ವಾಸವಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.