Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ರಾಜ್ಯಾದ್ಯಂತ ಇನ್ಮುಂದೆ 8 ವರ್ಷ ಮೀರಿದರೆ 1 ನೇ ತರಗತಿಗೆ ಪ್ರವೇಶ ನಿರ್ಬಂಧ- ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಎಲ್‌ ಕೆಜಿ, ಯುಕೆಜಿ ಮತ್ತು 1 ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಗಳಿಗೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿದ್ದು, ಇನ್ಮುಂದೆ 8 ವರ್ಷ ಮೀರಿದರೆ 1 ನೇ ತರಗತಿಗೆ ಪ್ರವೇಶ ನಿರ್ಬಂಧಿಸಿದ್ದು, ವಯಸ್ಸಿಗೆ ಅನುಗುಣವಾಗಿ ಬೇರೆ ತರಗತಿಗೆ ಪ್ರವೇಶ ನೀಡಲು ನಿರ್ಧರಿಸಿದೆ.

ಶಾಲಾ ವಿದ್ಯಾರ್ಥಿಗಳ ಪ್ರವೇಶ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ತೆರೆ ಎಳೆದಿದ್ದು, ಈ ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯವಾಗಿದ್ದರೂ 2023-24 ರಿಂದ 2025-26ನೇ ವರ್ಷದವರೆಗೆ ಕನಿಷ್ಠ ಮತ್ತು ಗರಿಷ್ಠ ವಯೋಮಿತಿ ನಿಗದಿ ಮಾಡಿ ಗೊಂದಲಕ್ಕೆ ತೆರೆ ಎಳೆದಿದೆ.

ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ LKG, UKG ಮತ್ತು 01ನೇ ತರಗತಿ ಪ್ರವೇಶಕ್ಕೆ ಈಗಾಗಲೇ ದಾಖಲಾತಿಗೆ ಕನಿಷ್ಮ ಅರ್ಹ ವಯೋಮಾನವನ್ನು ಪರಿಷ್ಕರಿಸಿ ನಿಗಧಿಪಡಿಸಲಾಗಿದೆ. ಅದರೆ ಗರಿಷ್ಟ ವಯೋಮಾನಗಳನ್ನು ಪರಿಷ್ಕರಿಸಿರುವುದಿಲ್ಲ. ಗರಿಷ್ಠ ವಯೋಮಿತಿಯನ್ನು ಪರಿಷ್ಕರಿಸುವುದರಿಂದ ಡ್ರಾಪ್ ಔಟ್ ಮಕ್ಕಳ ಸಂಖ್ಯೆಯನ್ನು ಸಹ ತಗ್ಗಿಸಬಹುದಾಗಿರುವ ಪ್ರಯುಕ್ತ LKG, UKG ಮತ್ತು 01ನೇ ತರಗತಿಗಳಿಗೆ ಈಗಾಗಲೇ ಮಕ್ಕಳ ದಾಖಲಾತಿಗಾಗಿ ಕನಿಷ್ಠ ವಯೋಮಿತಿಯನ್ನು ಪರಿಷ್ಕರಿಸಿ ನಿಗಧಿಪಡಿಸಿರುವಂತೆ ಗರಿಷ್ಠ ವಯೋಮಾನದ ಮಾನದಂಡವನ್ನು ಸಡಿಲಿಸಿ ಪರಿಷ್ಕರಿಸುವ ಅಗತ್ಯವಿದ್ದು, ಈ ಕೆಳಕಂಡಂತೆ ಪರಿಷ್ಕರಿಸಲು ಕೋರಿರುತ್ತಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, LKG, UKG ಮತ್ತು 01ನೇ ತರಗತಿ ಪ್ರವೇಶಕ್ಕೆ ಗರಿಷ್ಟ ವಯೋಮಾನಗಳನ್ನು 2023-24 ನೇ ಸಾಲಿನಲ್ಲಿ ಅನ್ವಯವಾಗುವಂತೆ ಈ ಕೆಳಕಂಡಂತೆ ನಿಗಧಿಪಡಿಸಿ ಆದೇಶಿಸಿದೆ.

Related Articles

Leave a Reply

Your email address will not be published. Required fields are marked *

Back to top button