Homeಜನಮನಪ್ರಮುಖ ಸುದ್ದಿ

‘ರಾಜಕೀಯ, ತುಷ್ಟೀಕರಣದಿಂದ ಗಲಭೆ’-ಡಾ.ಅಶ್ವತ್ಥನಾರಾಯಣ್

ಬೆಂಗಳೂರು: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ವಿಶ್ಲೇಷಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸತ್ಯಶೋಧನಾ ಸಮಿತಿಯ ನೇತೃತ್ವ ವಹಿಸಿದ್ದ ಅವರು ತಮ್ಮ ಸಮಿತಿಯ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರರಿಗೆ ಹಸ್ತಾಂತರ ಮಾಡಿದರು.

ಬಿ.ವೈ.ವಿಜಯೇಂದ್ರ, ಸತ್ಯಶೋಧನಾ ಸಮಿತಿಯಲ್ಲಿದ್ದ ಮಾಜಿ ಸಚಿವ ಕೆ.ಸಿ. ನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರ ಉಪಸ್ಥಿತಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮತಕ್ಕಾಗಿ ಆಪಾದಿತರ ಕೇಸುಗಳನ್ನು ಹಿಂಪಡೆಯಲಾಗಿದೆ. ಪೊಲೀಸರ ಸಂಪೂರ್ಣ ವೈಫಲ್ಯತೆ ಕಾಣುತ್ತದೆ. ಪೊಲೀಸರ ಕೈಕಟ್ಟಿ ಹಾಕಿದ್ದರು. ಏನೂ ಕ್ರಮ ಕೈಗೊಳ್ಳಲು ಅವರಿಗೆ ಅವಕಾಶ ಇರಲಿಲ್ಲ. ಯಾರ ಮೇಲೂ ಕೇಸ್ ಮಾಡುವ ಹಾಗಿಲ್ಲ. ಯಾರ ಮೇಲೂ ಕ್ರಮ ಕೈಗೊಳ್ಳುವಂತಿಲ್ಲ ಎಂಬ ಸ್ಥಿತಿ ಪೊಲೀಸರದಾಗಿತ್ತು ಎಂದು ವಿವರಿಸಿದರು.

ಇದೊಂದು ಪೂರ್ವಯೋಜಿತ ಕೃತ್ಯ..
25ರಿಂದ 30 ಜನರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡುತ್ತಿದ್ದರು. ಆಗ ಗಲಭೆ ಆಗಿದೆ. ಕಳೆದ ವರ್ಷವೂ ಗಲಭೆ ಆಗಿತ್ತು. ಇದು ಗೊತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈ ವೈಫಲ್ಯ ಮತ್ತು ತುಷ್ಟೀಕರಣ ಎದ್ದು ಕಾಣುವಂತಿದೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆರೋಪಿಸಿದರು. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ. ಆರೋಪಿಗಳು ಮಾಸ್ಕ್ ಧರಿಸಿದ್ದು ನೋಡಿದರೆ, ಪೆಟ್ರೋಲ್ ಬಾಂಬ್ ಸಿದ್ಧವಿಟ್ಟಿದ್ದನ್ನು ಗಮನಿಸಿದರೆ ಇದೊಂದು ಪೂರ್ವಯೋಜಿತ ಕೃತ್ಯ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button