Homeಜನಮನಪ್ರಮುಖ ಸುದ್ದಿವಿನಯ ವಿಶೇಷ
KMF ಇತಿಹಾಸದಲ್ಲಿಯೇ ಮೈಲಿಗಲ್ಲು: ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ- ಸಿಎಂ

ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು ಎಂದರು.