ಪ್ರಮುಖ ಸುದ್ದಿ
ದಾವಣಗೆರೆಯಲ್ಲಿ ಗುಂಡಿನ ದಾಳಿ, ಇಬ್ಬರ ಸ್ಥಿತಿ ಗಂಭೀರ!
ದಾವಣಗೆರೆ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ರೌಡಿಶೀಟರ್ ಗಳಾದ ಸತೀಶ್ ಮತ್ತು ಸುನೀಲ್ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ವಿದ್ಯಾನಗರ ಠಾಣೆಯ ಎಸ್ ಐ ಸಿದ್ದೇಶ್ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಗುಂಡಿನ ದಾಳಿಯಿಂದಾಗಿ ಇಬ್ಬರೂ ರೌಡಿಶೀಟರ್ ಗಳು ಗಾಯಗೊಂಡಿದ್ದಾರೆ. ಗಾಯಾಳು ರೌಡಿಗಳನ್ನು ವಶಕ್ಕೆ ಪಡೆದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಗಳ ಬಂಧನಕ್ಕೆ ತೆರಳಿದಾಗ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪರಿಣಾಮ ವಿದ್ಯಾನಗರ ಎಸ್ಐ ಸಿದ್ದೇಶ ಮತ್ತು ಪೇದೆ ಚಂದ್ರು ಗಾಯಗೊಂಡಿದ್ದಾರೆ. ಹೀಗಾಗಿ, ಆತ್ಮರಕ್ಷಣೆಗಾಗಿ ಎಸ್ಐ ಸಿದ್ದೇಶ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಾಳು ಎಸ್ಐ ಮತ್ತು ಪೇದೆ ಚಂದ್ರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.