Homeಜನಮನಪ್ರಮುಖ ಸುದ್ದಿ
ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ʻಇ-ಆಫೀಸ್ ತಂತ್ರಾಂಶʼ ಅನುಷ್ಠಾನ : ಸರ್ಕಾರ ಆದೇಶ
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಯ ಉಲ್ಲೇಖ (1) & (2) ರ ಸರ್ಕಾರಿ ಆದೇಶದಲ್ಲಿ ಇ- ಆಫೀಸ್ ತಂತ್ರಾಂಶವನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳ ಕಛೇರಿ/ ಪ್ರಾದೇಶಿಕ ಆಯುಕ್ತರುಗಳ ಕಛೇರಿ / ಜಿಲ್ಲಾಧಿಕಾರಿಗಳ ಕಛೇರಿ/ ಜಿಲ್ಲಾ ಪಂಚಾಯತ್ ಕಛೇರಿ/ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ (ಪ್ರಾದೇಶಿಕ ಮತ್ತು ಸಾಮಾಜಿಕ) ಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅನುಷ್ಠಾನಗೊಳಿಸಿ, ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಅನುಷ್ಠಾನ ಪ್ರಕ್ರಿಯೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿರುತ್ತದೆ.