ಇ-ಸಂಜೀವಿನಿ ಜಿಲ್ಲೆಯಲ್ಲಿ ಮಹತ್ತರ ಸಾಧನೆ- ಶಿಲ್ಪಾ ಶರ್ಮಾ
ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲು ಸಿಇಓ ಸಲಹೆ
ಯಾದಗಿರಿಃ ಸಮುದಾಯ ಆರೋಗ್ಯ ಅಧಿಕಾರಿಗಳು ನಿμÉ್ಠ, ಪ್ರಾಮಾಣಿಕತೆ ಮತ್ತು ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ನಮ್ಮ ಜಿಲ್ಲೆ ಆರೋಗ್ಯಯುತ ಜಿಲ್ಲೆಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು.
ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘ ಬೆಂಗಳೂರು ಶಾಖೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಪದನಾಮ ಪ್ರಥಮ ವಾರ್ಷಿಕೋತ್ಸವ ಸಂಭ್ರಮಾಚರಣೆ ಹಾಗೂ ವೈದ್ಯರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವಲ್ಲಿ ಸಮುದಾಯ ಆರೋಗ್ಯ ಅಧಿಕಾರಗಳ ಪಾತ್ರ ಬಹುಮುಖ್ಯವಾಗಿದೆ. ಹೀಗಾಗಿ ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಮತ್ತು ವೈದ್ಯರಿಗೆ ಸಲಹೆ ನೀಡಿದರು.
ಇ-ಸಂಜೀವಿನಿಯಲ್ಲಿ ರಾಜ್ಯದಲ್ಲಿಯೇ ಯಾದಗಿರಿ ಜಿಲ್ಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ. ಆಯುμÁ್ಮನ್ ಭಾರತ, ಇ-ಸಂಜೀವಿನಿ ಫಲವಾಗಿ ಇಂದು ಸಿಹೆಚ್‍ಒ ಅಧಿಕಾರಿಗಳಿಗೆ ನೇಮಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿದೆ. ಜಿಲ್ಲೆಯ ಆರೋಗ್ಯಯುತ ಅಭಿವೃದ್ಧಿಗಾಗಿ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ಇದೇ ರೀತಿಯಾಗಿ ಕಾರ್ಯನಿರ್ವಹಿಸುತ್ತಾ ಬಂದರೆ ಮೊದಲನೇ ಸ್ಥಾನದಲ್ಲಿ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿದ ಅವರು, ಕೋವಿಡ್‍ನ ಕಾಲದಲ್ಲಿ ಪ್ರತಿ ಮನೆಯಲ್ಲಿನ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು ಇ-ಸಂಜೀವಿನಿ ಕರೆಯೂ ಅಗತ್ಯವಾಗಿತ್ತು. ಸಾರ್ವಜನಿಕರಿಗೆ ಲಾಕ್‍ಡೌನ್ ಸಮಯದಲ್ಲಿ ಇ-ಸಂಜೀವಿನಿ ಕರೆ ಬಗ್ಗೆ ಮಾಹಿತಿ ನೀಡಲು ಶ್ರಮವಹಿಸಲಾಗಿದೆ.
ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪೆÇೀಷ್ಠಿಕಾಂಶಯುಳ್ಳ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಪ್ರದೇಶಗಳಿಗೆ ತಲುಪುವಂತೆ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ ಮತ್ತು ಮಾಸಿಕ ಸಭೆಯಲ್ಲಿ ಇನ್ನು ಹೆಚ್ಚಿನ ರೋಗಗಳ ನಿಯಂತ್ರಣದ ಮುನ್ನೆಚ್ಚರಿಕೆಯ ಬಗ್ಗೆ ಸಲಹೆಗಳನ್ನು ನೀಡಬೇಕೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಲಕ್ಷ್ಮೀಕಾಂತ, ತಾಲೂಕ ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಡಾ.ರಾಜಾ ವೆಂಕಟಪ್ಪ ನಾಯಕ, ಕಾರ್ಯಕ್ರಮ ಅಧಿಕಾರಿ ಡಾ.ಸಾಧಿಕ್ ಹಾಗೂ ಆರೋಗ್ಯ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ರಿಜ್ವಾನ್ ಖಾನ್ ಸ್ವಾಗತಿಸಿದರು. ಸುಭಾನಿ ಮತ್ತು ಐರನ್ ನಿರೂಪಿಸಿದರು.