ಪ್ರಮುಖ ಸುದ್ದಿ

ಗಸ್ತಿ ಸಾವಿನಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1 ರಂದು ಚುನಾವಣೆ

ನವದೆಹಲಿಃ ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಸಾವಿನಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1 ರಂದು ಚುನಾವಣೆ ನಿಗದಿಯಾಗಿದ್ದು, ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

ರಾಯಚೂರಿನ ಬಿಜೆಪಿ ಮುಖಂಡ ಅಶೋಕ್ ಗಸ್ತಿ ಕೋವಿಡ್-19 ಮತ್ತು ಬಹು ಅಂಗಾಂಗಳ ವೈಫಲ್ಯದಿಂದ ಸೆಪ್ಟೆಂಬರ್ನಲ್ಲಿ ಮೃತಪಟ್ಟಿದ್ದು, ಇದೇ ಜುಲೈನಲ್ಲಿ ಸಂಸತ್ ಸದಸ್ಯರಾಗಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು. ಡಿಸೆಂಬರ್ 1 ರಂದು ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button