ಪ್ರಮುಖ ಸುದ್ದಿ
ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನಃ ದರ್ಶನಾಪುರ ಸೇರಿದಂತೆ ಗಣ್ಯರ ಸಂತಾಪ
ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ತಿಪ್ಪಣ್ಣ ನಿಧನ

ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನ
ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ತಿಪ್ಪಣ್ಣ ನಿಧನ
ವಿವಿ ಡೆಸ್ಕ್ಃ ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ ಇಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 98 ವಯಸ್ಸಾಗಿತ್ತು.
ಎನ್.ತಿಪ್ಪಣ್ಣ ಅವರು, ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು.
ಸಂತಾಪಃ ವೀರಶೈವ ಮಹಾಸಭಾ ಸೇರಿದಂತೆ ರಾಜ್ಯದಾದ್ಯಂತ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ, ಬಿಜೆಪಿ ಮುಖಂಡರಾದ ಅಮೀನರಡ್ಡಿ ಪಾಟೀಲ್ ಯಾಳಗಿ, ಗುರು ಕಾಮಾ ಸೇರಿದಂತೆ ತಾಲೂಕು ಮಹಾಸಭಾದ ಅಧ್ಯಕ್ಷ ಸಿದ್ದಣ್ಣ ಸಾಹು ಆರಬೋಳ, ಮಲ್ಲು ಚಾಮನಾಳ ಸೇರಿದಂತೆ ವೀರಶೈವ ಸಮಾಜದ ಹಿರಿಯ ಮುಖಂಡ ಮಹೇಶ ಆನೇಗುಂದಿ, ಅಮೃತ ಹೂಗಾರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.