ಪ್ರಮುಖ ಸುದ್ದಿ
ವಸತಿಶಾಲೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ
ಯಾದಗಿರಿಃ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಫೆ.18 ರವಿವಾರದಂದು ನಡೆಯಬೇಕಿದ್ದ ಪ್ರವೇಶ ಪರೀಕ್ಷೆಯನ್ನು ಹೈಕೋರ್ಟ ತಡೆಯಾಜ್ಞೆ ನೀಡಿರುವ ಪರಿಣಾಮ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಸಮನ್ವಯಾಧಿಕಾರಿ ಸೂರಯ್ಯಬೇಗಂ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಪರೀಕ್ಷೆಯ ದಿನಾಂಕವನ್ನು ನಿಗದಿಯಾದ ನಂತರ ಮುಂಚಿತವಾಗಿ ಪ್ರಕಟಣೆಯಲ್ಲಿ ತಿಳಿಸಲಾಗುವುದು. ಅಲ್ಲದೆ ಈಗಾಗಲೇ ವಿತರಿಸಲಾದ ಪ್ರವೇಶ ಪತ್ರಗಳ ಮೂಲಕವೇ ನಾವು ಪ್ರಕಟಿಸಿದ ದಿನದಂಉ ಪರೀಕ್ಷೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.