Homeಜನಮನಪ್ರಮುಖ ಸುದ್ದಿ

ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರದ ಹಣ ಜಮಾ: ಕೃಷ್ಣ ಬೈರೇಗೌಡ

(crop compensation list) ಈ ಭಾರಿ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ಇದೀಗ ಬೆಳೆನಾಶವಾದ ರೈತರಿಗೆ ಬೆಳೆ ಪರಿಹಾರದ ಹಣ ಜಮಾ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್, ತೋಟಗಾರಿಕಾ ಬೆಳೆ 2,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು ಎಂದರು.

ಪ್ರಸ್ತುತ ರಾಜ್ಯ ಸರ್ಕಾರದ ಬಳಿ ಇರುವ ಸಂಪನ್ಮೂಲದಲ್ಲಿ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಹಾಗಾದರೆ ಯಾರಿಗೆ ಬೆಳೆಹಾನಿ ಪರಿಹಾರ ಹಣ ಜಮಾ ಆಗುತ್ತದೆ ಎಂಬುದರ ಈ ಕೆಳಗಿನ ಹಂತವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದಾಗಿದೆ.

https://parihara.karnataka.gov.in/service89/PaymentDetailsReport.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ
* ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ payment failed cases ಆಯ್ಕೆ ಮಾಡಿ
* ನಂತರ ಬೆಳೆ ಪರಿಹಾರ ವಿಫಲವಾದ ಪಟ್ಟಿ ದೊರೆಯಲಿದೆ.

ಬೆಳೆ ಪರಿಹಾರ ಯಶಸ್ಸಿನ ಪಟ್ಟಿ ಹೀಗೆ ಚೆಕ್ ಮಾಡಿ:
https://parihara.karnataka.gov.in/service89/PaymentDetailsReport.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ
* ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ payment Success cases ಆಯ್ಕೆ ಮಾಡಿ
* ನಂತರ ಬೆಳೆ ಪರಿಹಾರ ಯಶಸ್ಸಿನ ಪಟ್ಟಿ ದೊರೆಯಲಿದೆ.

Related Articles

Leave a Reply

Your email address will not be published. Required fields are marked *

Back to top button