ಪ್ರಮುಖ ಸುದ್ದಿ
ಅಗ್ನಿ ಅವಘಡ : ಮೂರು ಅಂಗಡಿಗಳು ಅಗ್ನಿಗಾಹುತಿ!
ಯಾದಗಿರಿ : ನಗರದ ಮುಸ್ಲಿಂಪುರದ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಬ್ದುಲ್ ರಹೆಮಾನ್ ಎಂಬುವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಆಕಸ್ಮಿಕ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಗುಜರಿ ಅಂಗಡಿಯಿಂದ ಇತರೆ ಅಂಗಡಿಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಹೀಗಾಗಿ, ಗುಜರಿ ಅಂಗಡಿ ಸೇರಿದಂತೆ ಇತರೆ ಮೂರು ಅಂಗಡಿಗಳಲ್ಲಿನ ವಸ್ತುಗಳು ಬೆಂಕಿಗಾಹುತಿ ಆಗಿವೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಸಂದರ್ಭದಲ್ಲಿ
ಬಡಾವಣೆ ಸುತ್ತಲೂ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಯಾದಗಿರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.