ಪ್ರಮುಖ ಸುದ್ದಿ
ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರು
ಬೆಂಗಳೂರು: ನಗರದಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.
ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.
ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.