ಪ್ರಮುಖ ಸುದ್ದಿ
ಸಚಿವ ಖರ್ಗೆ ದಿಡೀರ್ ಹಾಸ್ಟೆಲ್ ಭೇಟಿ : ಅವ್ಯವಸ್ಥೆ ಕಂಡು ಅಧಿಕಾರಿಗಳ ಸಸ್ಪೆಂಡ್ !
ಕಲಬುರಗಿ : ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಇಂದು ನಗರದ ಶಹಬಾದ್ ರಸ್ತೆಯಲ್ಲಿರುವ ಅಂಬೇಡ್ಕರ್ ಹಾಸ್ಟಲ್ ಗೆ ದಿಡೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟಲ್ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಹಾಸ್ಟಲ್ ವಾರ್ಡ್ ಸಂಜುಕುಮಾರ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಬಂದೇನವಾಜ್ ಅವರನ್ನು ಅಮಾನತ್ತು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸ್ಟಲ್ ಗಳಲ್ಲಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಕಲ ಮೂಲ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ಆಹಾರ ಪೂರೈಸಬೇಕು. ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖರ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡದರು.