ಪ್ರಮುಖ ಸುದ್ದಿ
ಸಚಿವ ಸ್ಥಾನ ಸಂಕಟ : ಬೆಂಬಲಿಗರ ಆಕ್ರೋಶ, ಬೆಂಕಿ, ಲಾಠಿ ಚಾರ್ಜ್!
ಬೆಂಗಳೂರು: ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ , ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಸುರಪುರ ಬಿಜೆಪಿ ಶಾಸಕ ರಾಜೂಗೌಡ , ಕಲಬುರಗಿ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ಸೇರಿದಂತೆ ಸಚಿವ ಸ್ಥಾನದಿಂದ ವಂಚಿತರಾದ ಅನೇಕ ಶಾಸಕರು ಈಗಾಗಲೇ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ನಗರದ ಗಾಂಧಿವೃತ್ತದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು ಬೈಕಿಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಸ್ಪಿ ಡಾ.ಕೆ.ಅರುಣ್ ಅವರು ಕೈಮೀರುವ ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಹೈದರಾಬಾದ್ ಕರ್ನಟಕಕ್ಕೆ ಕಡೆಗಣಿಸಿದ ಕಾರಣ ಕಲಬುರಗಿಯಲ್ಲೂ ಪ್ರತಿಭಟನೆ ವ್ಯಕ್ತವಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.