Homeಜನಮನಪ್ರಮುಖ ಸುದ್ದಿ
ಇಂದು ಜಾರ್ಖಂಡ್ ನೂತನ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಗುರುವಾರ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರನ್ನ ರಾಜ್ಯದಲ್ಲಿ ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ರಾಜೇಶ್ ಠಾಕೂರ್ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.