ಪ್ರಮುಖ ಸುದ್ದಿ
ಭೀಕರ ಅಪಘಾತ : ಐವರು ಸಾವು, ಮೂವರಿಗೆ ಗಂಭೀರ ಗಾಯ
ಕಲಬುರಗಿ : ತಾಲೂಕಿನ ಸಾವಳಗಿ ಗ್ರಾಮದ ಸಮೀಪ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ತಡರಾತ್ರಿ ದುರ್ಘಟನೆ ಸಂಭವಿಸಿದೆ. ಆಂಧ್ರದ ತಿರುಪತಿಯಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಚಿಂಚಪೂರ್ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರನ್ನು ಸಂಜಯಕುಮಾರ್ (28), ರಾಣಿ (25), ಭಾಗ್ಯಶ್ರೀ (23), ಶ್ರೇಯಾಸ್ (3) ಹಾಗೂ ಧೀರಜ್ (2) ಎಂದು ಗುರುತಿಸಲಾಗಿದೆ. ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಘಟನೆಗೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.