ಪ್ರಮುಖ ಸುದ್ದಿ

Dont miss : ಕಲಬುರಗಿಯಲ್ಲಿ ಎರಡು ದಿನಕಾಲ ಫಲಪುಷ್ಪ ಪ್ರದರ್ಶನ!

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ-ಆತ್ಮ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಫಲ-ಪುಷ್ಪ ಪ್ರದರ್ಶನವನ್ನು ಇದೇ ಸೆಪ್ಟೆಂಬರ್ 17 ಹಾಗೂ 18 ರಂದು ಕಲಬುರಗಿಯ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಫಲ-ಪುಷ್ಪ ಪ್ರದರ್ಶವನ್ನು ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ. ನೂರಾರು ವಿಧದ ವಿಶೇಷ ಫಲಪುಷ್ಪಗಳ ಪ್ರದರ್ಶನ ಹಾಗೂ ಸುಂದರ ಕಲಾಕೃತಿಗಳು ಜನಮನ ತಣಿಸಲಿವೆ.

ಮಂಗಳವಾರ ಸೆಪ್ಟೆಂಬರ್ 17 ರಂದು ಸಂಜೆ 5 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಫಲ-ಪುಷ್ಪ ಪ್ರದರ್ಶವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ್ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಾಸಕರಾದ ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ಎಂ.ವೈ.ಪಾಟೀಲ್, ಸುಭಾಷ ಆರ್.ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಕನೀಜ್ ಫಾತೀಮಾ, ಡಾ. ಅವಿನಾಶ ಜಾಧವ ಹಾಗೂ ವಿಧಾನ ಪರಿಷತ್ ಸದಸ್ಯರಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ್, ಡಾ.ಚಂದ್ರಶೇಖರ ಪಾಟೀಲ್, ತಿಪ್ಪಣ್ಣ ಕಮಕನೂರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಉಪಸ್ಥಿತರಿರುವರು.

Related Articles

Leave a Reply

Your email address will not be published. Required fields are marked *

Back to top button