ಪ್ರಮುಖ ಸುದ್ದಿ
ಬೈಕ್ ಡಿಕ್ಕಿ ಪಾದಚಾರಿ ಸಾವು
ಯಾದಗಿರಿಃ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಸುರುಪುರ ತಾಲೂಕಿನ ಕಡಕಲ್ಲ ಕ್ರಾಸ್ ಬಳಿ ನಿನ್ನೆ ರಾತ್ರಿ ನಡೆದಿದೆ.
ನಾಗರಾಜ ತಂದೆ ತಮ್ಮಣ್ಣ (62) ಮೃತ ದುರ್ದೈವಿ ಎಂದು ಗುರ್ತಿಸಲಾಗಿದೆ. ಈತ ಮೂಲತಃ ಕೆಂಬಾವಿ ಗ್ರಾಮದವರೆನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.