ಶಹಾಪುರದಲ್ಲಿ ಮಾ. 11 ರಂದು ವಿದ್ಯುತ್ ವ್ಯತ್ಯಯ – ಸಹಕಾರಕ್ಕೆ ಜೆಸ್ಕಾಂ ಮನವಿ
ಸುತ್ತಲಿನ ಗ್ರಾಮ, ತಾಂಡಾಗಳಿಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಶಹಾಪುರದಲ್ಲಿ ಮಾ. 11 ರಂದು ವಿದ್ಯುತ್ ವ್ಯತ್ಯಯ – ಸಹಕಾರಕ್ಕೆ ಜೆಸ್ಕಾಂ ಮನವಿ
ಮಾ.11 ಶನಿವಾರ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಶಹಾಪುರಃ ನಗರದ 110 ಕೆವಿ ವಿದ್ಯುತ್ ಸರಬರಾಜು ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಾ. 11 ಶನಿವಾರ ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಶಹಾಪುರ ವ್ಯಾಪ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಾರಣ ನಾಗರಿಕರು ಸಹಕರಿಸುವಂತೆ ಯಾದಗಿರಿ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿರಂತರ ವಿದ್ಯುತ್ ಪೂರೈಕೆ ಯಲ್ಲಿ ತೊಂದರೆಯಾಗದಂತೆ ಎಚ್ಚರಿಕೆವಹಿಸಲು 110 ಕೆವಿ ವಿದ್ಯುತ್ ಪೂರೈಕೆ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದ್ದು, ನಿಗದಿ ಪಡಿಸಿದ ಮಾ.11 ರಂದು ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ವಿವರಿಸಿದ್ದಾರೆ.
ಅಲ್ಲದೆ ನಗರದ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 33 ಕೆವಿ ಹಾಗೂ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಎಲ್ಲಾ ಸುತ್ತಮುತ್ತಲಿನ ಗ್ರಾಮಗಳಿಗೂ ಮತ್ತು ತಾಂಡಾಗಳು ಸೇರಿದಂತೆ ರೈತರ ಪಂಪ್ ಸೆಟ್ ಗಳಿಗೂ ವಿದ್ಯುತ್ ವ್ಯತ್ಯಯ ಸಮಸ್ಯೆ ಆಗಲಿದ್ದು, ನಾಗರಿಕರೆಲ್ಲರೂ ಸಹಕರಿಸಬೇಕೆಂದು ಕೋರಿದ್ದಾರೆ.