ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ : ಓರ್ವ ಆರೋಪಿ ಬಂಧನ
ಯಾದಗಿರಿ : ಗ್ರಾಮದ ಹಳ್ಳಕ್ಕೆ ಬಟ್ಟೆ ತೊಳೆಯಲು ಹೋದ ಬಾಲಕಿಗೆ ಕೆಲವರು ಲೈಂಗಿಕ ಕಿರುಕುಳ ನೀಡಿದ್ದರಂತೆ. ಪರಿಣಾಮ ಮನನೊಂದು ಬಾಲಕಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾರ್ಚ್ 19ರಂದು ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿತ್ತು. ಗಾಯಾಳು ಬಾಲಕಿಯನ್ನು ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಶಾಂತಾಪುರ ಕ್ರಾಸ್ ಬಳಿ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಬಾಲಕಿಯ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಾಲಕಿಯ ಸಾವಿಗೆ ನ್ಯಾಯ ಒದಗಿಸಿ ಆರೋಪಿಗಳನ್ನು ಬಂಧಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸುಮಾರು ಎರಡು ತಾಸುಗಳ ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
ಪ್ರತಿಭಟನೆಯ ಬಿಸಿ ತಟ್ಟುತ್ತಿದ್ದಂತೆ ಪ್ರಕರಣದ ಗಂಭೀರತೆ ಅರಿತ ಸುರಪುರ ಠಾಣೆಯ ಪೊಲೀಸರು ನಿಂಗಪ್ಪ ತಿಂಥಣಿ (19) ಎಂಬ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರಗತಿಯಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಿ ತಕ್ಕ ಶಿಕ್ಷೆಗೆ ಗುರಿಪಡಿಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.
Kirukula koduvavarigu hagu athyacharigalige
Katina shikshegagi kaanunu tiddupadi aaglebeku.