ಪ್ರಮುಖ ಸುದ್ದಿ
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಜೈಲು!
ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗೂ ಐದು ಲಕ್ಷ ರೂಪಾಯಿ ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಮಹತ್ವದ ತೀರ್ಪು ನೀಡಿದ್ದು ಲಾಲು ಪ್ರಸಾದ್ ಯಾದವ್ ಗೆ ಶಿಕ್ಷೆ ಪ್ರಕಟಿಸಿದ್ದಾರೆ.
ಬಹುಕೋಟಿ ಮೇವು ಹಗರಣದಲ್ಲಿ ಸಿಲುಕಿದ್ದ ಲಾಲೂ ಪ್ರಸಾದ್ ಯಾದವ್ ಜೈಲು ಪಾಲಾಗುತ್ತಾರೆಯೇ ಅಥವಾ ಖುಲಾಸೆ ಆಗುತ್ತಾರೆಯೇ ಎಂಬುದರ ಬಗ್ಗೆ ದೇಶಾದ್ಯಂತ ಭಾರೀ ಕುತೂಹಲ ಮೂಡಿತ್ತು. ಇಂದು ಲಾಲು ಜೈಲಿಗೆ ಸೇರುವುದು ಖಾಯಂ ಆಗಿದ್ದು ಸಿಬಿಐ ಕೋರ್ಟಿನಿಂದ ಮಹತ್ವದ ತೀರ್ಪು ಹೊರಬಿದ್ದಿದೆ.