ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Guest teacher recruitment 2024: ಟೀಚರ್ ಆಗಬೇಕು ಶಾಲೆಗಳಲ್ಲಿ ಕೆಲಸ ಮಾಡಬೇಕು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು ಎನ್ನುವವರಿಗೆ ಸಿಹಿ ಸುದ್ದಿ ಇದೆ, ಹೌದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಹಾಕಿ ಇದರ ಸಂಪೂರ್ಣ ಮಾಹಿತಿಯನ್ನು ಮುಂದೆ ತಿಳಿಸುತ್ತೇವೆ ನೋಡಿ ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.
ಇಲಾಖೆ: ಸಾರ್ವಜನಿಕ ಶಿಕ್ಷಣ ಇಲಾಖೆ
ಹುದ್ದೆಗಳ ಹೆಸರು: ಪ್ರೌಢಶಾಲಾ ಅತಿಥಿ ಶಿಕ್ಷಕರು
ಹುದ್ದೆಗಳ ಸಂಖ್ಯೆ: 8954 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ
ವೇತನ ಶ್ರೇಣಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10500/- ವೇತನ ಸಿಗುತ್ತದೆ.
ವಿದ್ಯಾರ್ಹತೆ: ಈ ಕೆಲಸಕ್ಕೆ ಸೇರಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಬಿಎಡ್ ಮುಗಿಸಿರಬೇಕು
ವಯೋಮಿತಿ: ಅರ್ಜಿದಾರರು ಪ್ರಕಟಣೆಯಲ್ಲಿ ನಿರ್ದಿಷ್ಟಪಡಿಸಿದ ವಯಸ್ಸಿನೊಳಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ?
ಮುಖ್ಯ ಶಿಕ್ಷಕರುಗಳ ನೇತೃತ್ವದ ಆಯ್ಕೆ ಸಮಿತಿಯು ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-06-2024
ಅರ್ಜಿ ಹಾಕುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಕೆಳಗಿನ ಲಿಂಕ್‌ನಿಂದ ವಿವರಗಳನ್ನು ಓದಬಹುದು. ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಸ್ವವಿವರಗಳು ಮತ್ತು ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಖಾಲಿ ಹುದ್ದೆಯ ಪ್ರಕಟಣೆಯನ್ನು ಸ್ವೀಕರಿಸಿದ ತಕ್ಷಣ ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಗೆ ಕಳುಹಿಸಬೇಕಾಗುತ್ತದೆ. ಹುದ್ದೆಯ ಲಿಂಕ್