ಪ್ರಮುಖ ಸುದ್ದಿ
ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ರಾಜ್ಯಪಾಲರಿಂದ ಖಡಕ್ ಸೂಚನೆ!
ಬೆಂಗಳೂರು: ವಿಶ್ವಾಸ ಮತ ಯಾಚನೆ ಮುಂದೂಡಿರುವ ಕಾರಣ ಅರವಿಂದ ಲಿಂಬಾವಳಿ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಅನಗತ್ಯ ಸಮಯ ವ್ಯಯಿಸಿ ವಿಶ್ವಾಸ ಮತ ಮುಂದೂಡಲಾಗುತ್ತಿದೆ ಎಂದು ದೂರು ನೀಡಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ ರಾಜ್ಯಪಾಲ ವಜುಭಾಯಿ ವಾಲಾ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದು ಖಡಕ್ ಸೂಚನೆ ನೀಡಿದ್ದಾರೆ.
ಹದಿನೈದು ಜನ ಶಾಸಕರು ನನ್ನ ಬಳಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ. ವಿಶ್ವಾಸ ಮತ ಯಾಚನೆ ಮುಂದೂಡಿ ಕಾಲಹರಣ ಮಾಡದೇ ನಾಳೆ ಮದ್ಯಾನ 1:30 ರ ಒಳಗೆ ವಿಶ್ವಾಸ ಮತ ಸಾಬೀತು ಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.