ಪ್ರಮುಖ ಸುದ್ದಿ
ಶಹಾಪುರಃ 2 ಗುಂಪುಗಳ ನಡುವೆ ಘರ್ಷಣೆ, 3 ಜನ ಆಸ್ಪತ್ರೆಗೆ ದಾಖಲು
ಶಹಾಪುರಃ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಶುಕ್ರವಾರ ಗ್ರಾಮದೇವತೆ ಉತ್ಸವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಮೂರು ಜನರು ಗಾಯಗೊಂಡಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಗ್ರಾಮದಲ್ಲಿ ಶಾಂತಿಯುತ ವಾತಾವರಣವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
——————–