ನಿಮ್ಮ ಊರು ಅಥವಾ ಸಿಟಿಯಲ್ಲಿ ಉಚಿತ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಅಹ್ವಾನ
Grama One New Application 2024: ಉಚಿತ ಗ್ರಾಮ್ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಾಡಲಾಗಿದೆ (ಗ್ರಾಮ್ ಒನ್ ಆನ್‌ಲೈನ್ ಅಪ್ಲಿಕೇಶನ್). ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ತರಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಜಾರಿಗೊಳಿಸಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒಂದರ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು https://www.karnatakaone.gov.in/Public/GramOneFrachiseeTerms ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇತರ ಚಾನಲ್‌ಗಳ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ದಯವಿಟ್ಟು GramOne ನಲ್ಲಿ ಲಭ್ಯವಿರುವ ಸೇವೆಗಳ ಪಟ್ಟಿಯನ್ನು ಮತ್ತು ಕೆಳಗಿನ PDF ನಿಂದ ಅಗತ್ಯವಿರುವ ದಾಖಲೆಗಳನ್ನು ಡೌನ್‌ಲೋಡ್ ಮಾಡಿ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.