ಪ್ರಮುಖ ಸುದ್ದಿ
ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ 2000 ರೂ.
ಗೃಹಲಕ್ಷ್ಮಿ ಯೋಜನೆಯಿಂದ ಬಡ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ರೂ. ಹಾಕಲಾಗುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ.
ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತೃತೀಯ ಲಿಂಗಿಗಳಿಗೆ ಹಣನೀಡಲು ಆದೇಶ ಆಗಿದೆ.
ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನ ಅಭಿವೃದ್ಧಿಪಡಿಸುತ್ತಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳಿನಿಂದಲೇ ತೃತೀಯ ಲಿಂಗಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.