ಪ್ರಮುಖ ಸುದ್ದಿ
ಗುಂಪು ಘರ್ಷಣೆ : ಎಂಟು ಜನರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಯಾದಗಿರಿ : ಶಹಾಪುರ ತಾಲೂಕಿನ ಗುಂಡಲೂರು ಗ್ರಾಮದ ಯುವಕನೋರ್ವ ಯುವತಿಯನ್ನು ಚುಡಾಯಿಸಿದ ಎಂಬ ವಿಚಾರಕ್ಕೆ ಸಂಭಂಧಿಸಿದಂತೆ ಗುಂಪು ಘರ್ಷಣೆ ನಡೆದಿದೆ. ಪರಿಣಾಮ ಘರ್ಷಣೆಯಲ್ಲಿ ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಡಗೇರಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ವಡಗೇರಾ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣವಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗುಂಪು ಘರ್ಷಣೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘರ್ಷಣೆಗೆ ನಿಖರವಾದ ಕಾರಣವೇನು ಎಂಬುದರ ತನಿಖೆ ನಡೆಸುತ್ತಿದ್ದಾರೆ. ತಪ್ಪಿತ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಪೊಲೀಸ್ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.