ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಃ ಮುಂಚೂಣಿಯಲ್ಲಿ ಖರ್ಗೆ ಹೆಸರು
ನವದೆಹಲಿಃ ಕಾಂಗ್ರೆಸ್ ಪಕ್ಷದ ಮಹತ್ವದ ಕಾರ್ಯಾಕಾರಿ ಸಮಿತಿ ಸಭೆ ನಾಳೆ ನಡೆಯಲಿದೆ. ಈ ಸಂದರ್ಭ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿ ಕುರಿತಂತೆ ಬಿರುಸಿನ ಚರ್ಚೆ ಆರಂಭವಾಗಿದೆ.
ಗಾಂಧಿ ಕುಟುಂಬದ ಹೊರತಾದ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದೇ ಸೂಕ್ತ ಎಂದು ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರಿಗಾಗಿ ಶೋಧಕಾರ್ಯ ಆರಂಭವಾಗಿದೆ.
ಪ್ರಮುಖವಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಮಾಜಿ ಮುಖ್ಯಮಂತ್ರಿ ಎ.ಕೆ.ಆಂಟನಿ ಮತ್ತು ಮುಕುಲ್ ವಾಸ್ನಿಕ್ ಹೆಸರು ಕೇಳಿ ಬರುತ್ತಿದೆ. ಇವರಲ್ಲಿ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ.
ಹಿಂದಿ ಭಾಷೆಯ ಮೇಲೆ ಹಿಡಿತ ಹೊಂದಿರುವ ಮತ್ತು ಗಾಂಧಿ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ. ಖರ್ಗೆ ಅವರ ಆ ಅರ್ಹತೆಯೂ ಇದೆ.
ಈ ನಡುವೆ 23 ಮಂದಿ ಹಿರಿಯ ಕಾಂಗ್ರೆಸ್ ನಾಯಕರು ನಾಯಕತ್ವ ಕುರಿತಂತೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹಿಗಾಗಿ ಕಾಂಗ್ರೆಸ್ ನಲ್ಲಿ ಇದೀಗ ಬಣ ರಾಜಕೀಯ ಆರಂಭವಾಗಿದ್ದು, ಆದಾಗ್ಯೂ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಹೊಂದುವ ಲಕ್ಷಣಗಳು ಖರ್ಗೆ ಅವರಲ್ಲಿವೆ. ಯಾವುದಕ್ಕೂ ಕಾದು ನೋಡಬೇಕು.