Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಪೇರಳೆ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳು
ಪೇರಳೆ ಹಣ್ಣು ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಪೇರಳೆ ಹಣ್ಣಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೀಜಗಳು ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತವೆ ಮತ್ತು ಮಲಬದ್ದತೆ ನಿವಾರಿಸುತ್ತವೆ. ಇದರಲ್ಲಿ ವಿಟಮಿನ್ ಸಿ ಅಧಿಕ ಪ್ರಮಾಣದಲ್ಲಿ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಜೊತೆಗೆ ದೇಹಕ್ಕೆ ಅಗತ್ಯವಿರುವ ಪೌಷ್ಟಿಕಾಂಶಗಳನ್ನು ಒದಗಿಸುತ್ತದೆ.