Homeಪ್ರಮುಖ ಸುದ್ದಿ
ಅಪಹರಣ ಪ್ರಕರಣ: ಶಾಸಕ ಹೆಚ್ಡಿ ರೇವಣ್ಣ ಜೈಲಿಂದ ಬಿಡುಗಡೆ
ಬೆಂಗಳೂರು: ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಸೋಮವಾರ (ಮೇ. 13) ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಹೆಚ್ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು.
ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರು.