ಪ್ರಮುಖ ಸುದ್ದಿ
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಾಲಕನಿಂದ ಹಲ್ಲೆ
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
ಕೋಲಾರಃ ಕ್ಷುಲ್ಲಕ ಕಾರಣಕ್ಕೆ ಅರಣ್ಯ ಇಲಾಖೆಯ ಜೀಪ್ ಚಾಲಕ ಅದೇ ಇಲಾಖೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೂರಂಡಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ರವಿಕುಮಾರ್ ಮೇಲೆ ಜೀಪ್ ಚಾಲಕ ಸಾಯಿನಾಥ್ ಎಂಬಾತನೇ ಹಲ್ಲೆ ನಡೆಸಿದ್ದಾನೆ.
ಹಲ್ಲೆಗೆ ಒಳಗಾದ ಅರಣ್ಯ ಇಲಾಖೆ ನೌಕರ ರವಿಕುಮಾರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸ್ಥಳಕ್ಕೆ ಮಾಲೂರು ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ ಘಟನೆ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.