ಅಂಕಣ

ಅತಂತ್ರದ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಬಾಳು ಬೆಳಗಿದ ಅತಿಥಿ ಉಪನ್ಯಾಸಕರು.!

ಅತಿಥಿ ಉಪನ್ಯಾಸಕರ ಗೋಳು ಕೇಳೋರ್ ಯಾರು.?

ಅತಂತ್ರದ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಬಾಳು ಬೆಳಗಿದ ಅತಿಥಿ ಉಪನ್ಯಾಸಕರು.!

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸದೆ, ನಿರ್ಲಕ್ಷಿಸಿ ರಾಜ್ಯ ಸರ್ಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಮಾಡಲು ಆದೇಶಿಸಿರುವುದರಿಂದ ಅತಿಥಿ ಉಪನ್ಯಾಸಕರ ಬದುಕು ಬೀದಿ ಪಾಲಾಗುವುದರಲ್ಲಿ ಸಂದೇಹವೇ ಇಲ್ಲ.

ಕೊರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಅತಿಥಿ ಉಪನ್ಯಾಸಕರು ಹಲವಾರು ತಲ್ಲಣಗಳ, ಸಂಕಷ್ಟದ, ಆತಂತ್ರದ ಜೀವನವನ್ನು ಸಾಗಿಸುತ್ತಿದ್ದಾರೆ.

ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಕೊರೋನಾ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಅನೇಕರು ಬೀದಿಯಲ್ಲಿ ಹೊಟೇಲ್, ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇಂತಹ ಸಂಕಷ್ಟದ ನಡುವೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸಿ ಸೇವಾ ಬಧ್ರತೆ ನೀಡದೆ ಮತ್ತು ನೇಮಕಾತಿಯ ಪ್ರಕ್ರಿಯೆಯಲ್ಲಿ ಯಾವುದೇ ಅನುಕಂಪ ನೀಡದೆ, ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸದೆ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿಗೆ ಆದೇಶ ಮಾಡಿರುವುದು ಸರಿಯಾದ ಕ್ರಮವಲ್ಲ.

ನಾಡಿನ ಸಾಂಸ್ಕೃತಿಕ ಚಿಂತಕ ಬರಗೂರು ರಾಮಚಂದ್ರಪ್ಪ, ಹಿರಿಯ ರಾಜಕೀಯ ಧುರೀಣರು ಹಾಗೂ ಶಿಕ್ಷಣ ಚಿಂತಕರಾದ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಆಯುನೂರ ಮಂಜುನಾಥ ಮುಂತಾದವರು ಹಾಗೂ ಅತಿಥಿ ಉಪನ್ಯಾಸಕರ ರಾಜ್ಯ ಒಕ್ಕೂಟವು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸಬೇಕು ಎಂದು ಹಲವು ಬೇಡಿಕೆಗಳೊಂದಿಗೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರೂ ಸಹ ಸರ್ಕಾರ ಮಾನವೀಯತೆಯನ್ನು ಮರೆತು 15 – 20 ವರ್ಷಗಳಿಂದ ಕಡಿಮೆ ಸಂಬಳದಲ್ಲಿ ಕುಟುಂಬದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ನಿಸ್ವಾರ್ಥದಿಂದ, ವೃತ್ತಿ ಬದ್ದತೆಯಿಂದ ಪಾಠ ಭೋದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ರಾಜ್ಯದ ಸಹಸ್ರ- ಸಹಸ್ರಾರು ವಿದ್ಯಾರ್ಥಿಗಳ ಬಾಳು ಬೆಳಗಿದ ಅತಿಥಿ ಉಪನ್ಯಾಸಕರು ಸೇವೆಯನ್ನು ಸರ್ಕಾರ ಪರಿಗಣಿಸದೆ ಇರುವುದು ವಿಷಾದನೀಯ ಸಂಗತಿ.

ನಾಡಿನ ಶಿಕ್ಷಣ ಚಿಂತಕರು, ಪ್ರಗತಿಪರ, ವಿಚಾರವಂತರು, ರಾಜಕೀಯ ತಜ್ಞರು, ಕಾನೂನು ತಜ್ಞರು, ನ್ಯಾಯವಾದಿಗಳು, ರಾಜಕೀಯ ಧುರೀಣರು ಮುಂತಾದವರು ರಾಜ್ಯದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತ ಆತಂತ್ರದ ಜೀವನದ ಸಾಗಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸಬೇಕು ಎಂದು ಸರ್ಕಾದ ಗಮನಕ್ಕೆ ತರವುದರ ಮೂಲಕ ಆದೇಶ ಮಾಡಿರುವ ಸಹಾಯದಿಂದ ಪ್ರಾಧ್ಯಾಪಕರ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು‌ ಈ ಮೂಲಕ ಮಾನವೀಯತೆ ಮೆರಯಬೇಕು.  ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಕೊರೊನಾ ಮಹಾಮಾರಿಯ ಸಂಕಷ್ಟದ ನಡುವೆ ಅತಿಥಿ ಉಪನ್ಯಾಸಕರು ಆನ್ ಪಾಠ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಪಠ್ಯಚಟುವಟಿಕೆಗಳಿಗೆ ತೊಂದರೆಯಾಗದಂತೆ ಭೊಧನಾ ಕಾರ್ಯಗಳಲ್ಲಿ ನಿರತರಾಗಿರುವ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು. ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಆಧ್ಯತೆ ನೀಡಬೇಕೆಂದು ಕೋರುತ್ತೇವೆ. – –

-ರಾಘವೇಂದ್ರ ಹಾರಣಗೇರಾ ಸಮಾಜಶಾಸ್ತ್ರ ಉಪನ್ಯಾಸಕರು ಶಹಾಪುರ. ಮೊ. 9901559873.

Related Articles

Leave a Reply

Your email address will not be published. Required fields are marked *

Back to top button