ಪ್ರಮುಖ ಸುದ್ದಿ
ಪಠ್ಯಪುಸ್ತಕ ಪೂರೈಕೆಃ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ
ವಿವಿ ಡೆಸ್ಕ್ಃ ಕೊರೊನಾ ಬಿಕ್ಕಟ್ಟಿನಿಂದಾಗಿ ಶಾಲೆ ಯಾವಾಗ ಆರಂಭವಾಗುತ್ತದೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಕೊರೋನಾದಿಂದಾಗಿ ಶಾಲೆಗಳಿಗೆ ಜುಲೈ 31 ರವರೆಗೆ ರಜೆ ನೀಡಲಾಗಿದೆ. ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನು ದಿನ ನಿಗದಿಯಾಗಿಲ್ಲ. ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಮನೆಬಾಗಿಲಿಗೆ ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ ವರೆಗೆ ಶಾಲೆಗಳ ಆರಂಭವಾಗುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಮಕ್ಕಳು ಮನೆಯಲ್ಲಿ ಓದಿಕೊಳ್ಳಲಿ ಎನ್ನುವ ಉದ್ದೇಶದಿಂದ ಮನೆ ಬಾಗಿಲಿಗೆ ಪಠ್ಯಪುಸ್ತಕ ಪೂರೈಕೆ ಮಾಡಲಾಗುವುದು.
ಖಾಸಗಿ ಶಾಲೆಗಳು ಈಗಾಗಲೇ ಹಣ ಪಾವತಿಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಪಠ್ಯಪುಸ್ತಕ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಆರಂಭವಾಗಿಲ್ಲ. ಪ್ರತಿ ವರ್ಷ ಜೂನ್ ವೇಳೆಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತದೆ.