ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್: ಈ ದಿನ ಹೊಸ ಕಾರ್ಡ್ ವಿತರಣೆ ಆರಂಭ

(new-bpl-card:) ಉಚಿತ ಚಿಕಿತ್ಸೆ ಅಥವಾ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಈ ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿ ಹಲವು ಮಂದಿ ಕಾಯುತ್ತಿದ್ದು, ಅಂತಹವರಿಗೆ ಇದೀಗ ಗುಡ್ ನ್ಯೂಸ್ ಒಂದು ಆಹಾರ ಸಚಿವ ನೀಡಿದ್ದಾರೆ.
ಹೌದು, ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ಬಿಪಿಎಲ್’ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಬರುತ್ತಿದೆ. ತಮ್ಮ ಇಲಾಖೆಯು ಅರ್ಜಿಗಳ ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಕುಟುಂಬದ ಸದಸ್ಯರು ಒಂದೇ ಮನೆಯಲ್ಲಿ ವಾಸವಾಗಿರದೆ ಬೇರೆ ಬೇರೆ ಮನೆಗಳಲ್ಲಿ ವಾಸ ಮಾಡುತ್ತಿದ್ದು, ಅಂತಹವರು ಬಿಎಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ್ದರೆ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ್ ಆಹಾರ ಮತ್ತು ನಾಗರಿಕ ಪೂರೈಕೆಗೆ ಇಲಾಖೆಗೆ ದೃಢೀಕರಣ ನೀಡಬೇಕಾಗುತ್ತದೆ ಎಂದು ಹೇಳಿದರು.