Homeಪ್ರಮುಖ ಸುದ್ದಿ
ಇಂದು ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆ
2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಅವರು ಈ ಸ್ಥಾನವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಸ್ಪೀಕರ್ ಯುಟಿ ಖಾದರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ. ಪ್ರಸ್ತುತ
ಹೆಚ್‌ಡಿಕೆ ಕೇಂದ್ರದಲ್ಲಿ ಕೈಗಾರಿಕಾ ಸಚಿವರಾಗಿದ್ದಾರೆ.