Homeಪ್ರಮುಖ ಸುದ್ದಿ

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 54,658 ಮತಗಳಿಂದ ಮುನ್ನಡೆ

ಮಂಡ್ಯ: ಜಿಲ್ಲೆಯ ಲೋಕಸಭಾ ಚುನಾವಣೆಯ ಮತಏಣಿಕೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾರೀ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಬರೋಬ್ಬರಿ 54,658 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದ ತೀವ್ರ ಜಿದ್ದಾಜಿದ್ದಿನ ಕಣವಾಗಿ ಏರ್ಪಟ್ಟಿರುವಂತ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು @ ವೆಂಕಟರಮಣೇಗೌಡ ಅವರು 79,799 ಮತಗಳನ್ನು ಇಲ್ಲಿಯವರೆಗೆ ಸಿಕ್ಕಂತ ಫಲಿತಾಂಶದಲ್ಲಿ ಪಡೆದಿದ್ದರೇ, ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ 1,34,457 ಮತಗಳನ್ನು ಪಡೆದಿದ್ದಾರೆ.

ಒಟ್ಟಾರೆಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು 54,658 ಮತಗಳಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button