ಪ್ರಮುಖ ಸುದ್ದಿ
ಮುಖ್ಯಮಂತ್ರಿ ಯಡಿಯೂರಪ್ಪ ಕಾಣೆಯಾಗಿದ್ದಾರೆ – ಮಾಜಿ ಸಿಎಂ ಹೆಚ್ ಡಿಕೆ ವ್ಯಂಗ್ಯ
ಬೆಂಗಳೂರು : ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ನಿಖಿಲ್ ಎಲ್ಲಿದೀಯಪ್ಪಾ’ ಎಂದು ಟ್ರೋಲ್ ಮಾಡಿದ್ದರು. ಈಗ ರಾಜ್ಯದಲ್ಲಿ ನೆರೆ ಪ್ರವಾಹ ಇದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾಣೆಯಾಗಿದ್ದಾರೆ. ಈಗ ‘ಯಡಿಯೂರಪ್ಪ ಎಲ್ಲಿದೀಯಪ್ಪಾ’ ಎಂದು ಕೇಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪ ಅವರು ನಮ್ಮ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದರು, ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂದು ಆರೋಪಿಸುತ್ತಿದ್ದರು. ಈಗ ಅವರು ವರ್ಗಾವಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.