ಪ್ರಮುಖ ಸುದ್ದಿ
ರಾಜ್ಯ ಸರ್ಕಾರಿ ನೌಕರರಿಗೆ ಮೈತ್ರಿ ಸರ್ಕಾರದ ಭರ್ಜರಿ ಗಿಫ್ಟ್!
ಬೆಂಗಳೂರು: ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ರಾಜ್ಯ ಸರ್ಕಾರ ನಿರ್ಣಯಿಸಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದೋಸ್ತಿ ಸರ್ಕಾರ ಬಂಪರ್ ಗಿಫ್ಟ್ ನೀಡಲು ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹಿ ಒಂದೇ ಬಾಕಿಯಿದೆ ಎಂದು ತಿಳಿದು ಬಂದಿದೆ.
ಮಹಾತ್ಮರ ದಿನಗಳಂದು ಘೋಷಿಸಿರುವ ರಜೆಗಳೇ ಹೆಚ್ಚಾಗಿದ್ದ ರಜಾದಿನಗಳನ್ನು ಕಡಿತಗೊಳಿಸಬೇಕೆಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಮತ್ತೊಂದು ರಜೆ ಘೋಷಣೆಗೆ ಮುಂದಾಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.